ಗೋಕಾಕ:72ನೇ ಸ್ವಾತಂತ್ರ್ಯ ದಿನಾಚರಣೆ : ಗಮನ ಸೆಳೆದ ಮಹಾನ್ ಪುರುಷರ ರೂಪಕಗಳು
72ನೇ ಸ್ವಾತಂತ್ರ್ಯ ದಿನಾಚರಣೆ : ಗಮನ ಸೆಳೆದ ಮಹಾನ್ ಪುರುಷರ ರೂಪಕಗಳು
ಬೆಟಗೇರಿ ಅ 16 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಬಸವಲಿಂಗ ಪ್ರಭು ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್.ಎಸ್.ವೈ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಬುಧವಾರ ಆ.15 ರಂದು ನಡೆದ 72 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಮಹಾದೇವ ಹೊರಟ್ಟಿ ಧ್ವಜಾರೋಹಣ ನೆರವೇರಿಸಿದರು. ಆಂಗ್ಲ ಭಾಷಾ ಉಪನ್ಯಾಸಕ ಬಸವರಾಜ ಕುರಬೇಟ ಸ್ವಾತಂತ್ರ್ಯ ದಿನಾಚರಣೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಚಂದ್ರಶೇಖರ ಹೂಗಾರ ಅಧ್ಯಕ್ಷತೆ ವಹಿಸಿದ್ದರು.
ಶಾಲಾ-ಕಾಲೇಜು ಮಕ್ಕಳಿಂದ ಭಾಷಣ, ಸಾಂಸ್ಕಂತಿಕ ಕಾರ್ಯಕ್ರಮ ನಡೆದು ಮನರಂಜಿದವು. ಬಳಿಕ ಬಹುಮಾನ, ಸಿಹಿ ವಿತರಿಸಲಾಯಿತು. ಸಂಸ್ಥೆಯ ಆಡಳಿತ ಸದಸ್ಯರು, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ, ಶಿಕ್ಷಕರು, ಕಾಲೇಜು ಉಪನ್ಯಾಸಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.