ಗೋಕಾಕ:ಶಾಲೆಗಳು ಪ್ರಗತಿ ಸಾಧಿಸಲು ಸ್ಥಳೀಯರ ಸಹಾಯ ಸಹಕಾರ ಅತ್ಯಂತ ಅವಶ್ಯ : ರಮೇಶ ಅಳಗುಂಡಿ
ಶಾಲೆಗಳು ಪ್ರಗತಿ ಸಾಧಿಸಲು ಸ್ಥಳೀಯರ ಸಹಾಯ ಸಹಕಾರ ಅತ್ಯಂತ ಅವಶ್ಯ : ರಮೇಶ ಅಳಗುಂಡಿ
ಬೆಟಗೇರಿ ಅ 17 : ಗ್ರಾಮೀಣ ವಲಯದ ಶಾಲೆಗಳು ಪ್ರಗತಿ ಸಾಧಿಸಲು ಸ್ಥಳೀಯರ ಸಹಾಯ ಸಹಕಾರ ಅತ್ಯಂತ ಅವಶ್ಯಕವಾಗಿದೆ. ಗ್ರಾಮಸ್ಥರ ಜೋತೆ ಶಾಲೆಯ ಶಿಕ್ಷಕರ ಅವಿನಾಭವ ಸಂಬಂಧವಿರಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರಪ್ಪ ವೀರಸಂಗಪ್ಪ ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರಪ್ಪ ವೀರಸಂಗಪ್ಪ ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬುಧವಾರ ಆ.15 ರಂದು ನಡೆದ ಶಾಲೆಯ ಆವರಣ ಸ್ವಚ್ಛತೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಥಳೀಯರು ಪ್ರೌಢ ಶಾಲೆಯ ಸಮಗ್ರ ಪ್ರಗತಿಗೆ ನೀಡುತ್ತಿರುವ ಸಹಾಯ, ಸಹಕಾರ ಅವಿಸ್ಮರಣೀಯವಾಗಿದೆ ಎಂದು ಅಭಿಪ್ರಾಯ ಪಟ್ಟರು.
ಇಲ್ಲಿಯ ಗ್ರಾಮ ಪಂಚಾಯ್ತಿ ಪಿಡಿಒ ಬಿ.ಎಫ್.ದಳವಾಯಿ ಮುಖ್ಯಅತಿಥಿಗಳಾಗಿ ಮಾತನಾಡಿ, ಗ್ರಾಮದ ಗ್ರಾಪಂ ಅನುದಾನದಡಿಯಲ್ಲಿ ಶಾಲೆಯ ಆವರಣದಲ್ಲಿ ಬೆಳೆದ ಗಿಡಕಂಟಿಗಳನ್ನು, ನಿರೂಪಯುಕ್ತ ಕಲ್ಲು, ಕಸ ಸ್ವಚ್ಛಗೊಳಿಸುವ ಕೆಲಸ ಕೈಗೊಳ್ಳಲಾಗಿದೆ. ಗ್ರಾಪಂ ಸಹಯೋಗದಲ್ಲಿ ಶಾಲೆಯ ಪ್ರಗತಿಗೆ ಬೇಕಾದ ಅವಶ್ಯಕ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವದು ಎಂದರು. ಗ್ರಾಮ ಪಂಚಾಯ್ತಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಶಾಲೆಯ ಆವರಣ ಸ್ವಚ್ಛತೆ ಕೆಲಸಕ್ಕೆ ಚಾಲನೆ ನೀಡಿದ ಬಳಿಕ ಶಾಲೆಯ ಪರವಾಗಿ ಅವರನ್ನು ಸತ್ಕರಿಸಲಾಯಿತು.
ತಾಪಂ ಸದಸ್ಯ ಲಕ್ಷ್ಮಣ ನೀಲಣ್ಣವರ, ಎಸ್‍ಡಿಎಮ್‍ಸಿ ಅಧ್ಯಕ್ಷ ಕುತುಬುಸಾಬ ಮಿರ್ಜಾನಾಯ್ಕ, ಶಿಕ್ಷಣಪ್ರೇಮಿಗಳಾದ ಎಮ್.ಐ.ನೀಲಣ್ಣವರ, ಶ್ರೀಶೈಲ ಗಾಣಗಿ, ಈರಯ್ಯ ಹಿರೇಮಠ, ಶಿವಾಜಿ ನೀಲಣ್ಣವರ, ಎಸ್‍ಡಿಎಮ್‍ಸಿ ಉಪಾಧ್ಯಕ್ಷ ಚಂದ್ರಶೇಖರ ನೀಲಣ್ಣವರ, ಗ್ರಾಪಂ ಕಾರ್ಯದರ್ಶಿ ಗೌಡಪ್ಪ ಮಾಳೇದ, ಸುರೇಶ ಬಾಣಸಿ, ಅಜ್ಜಪ್ಪ ಪೇದನ್ನವರ, ಟಿ.ಎಲ್ ಲೇಂಡ್ವೆ ಸೇರಿದಂತೆ ಗ್ರಾಪಂ ಸದಸ್ಯರು, ಶಾಲೆಯ ಶಿಕ್ಷಕರು, ಎಸ್‍ಡಿಎಮ್‍ಸಿ ಸದಸ್ಯರು, ಇತರರು ಇದ್ದರು.
ಮೋಹನ ತುಪ್ಪದ ಸ್ವಾಗತಿಸಿದರು. ಮಲ್ಲಿಕಾರ್ಜುನ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು. ಮಂಜುನಾಥ ಹತ್ತಿ ಕೊನೆಗೆ ವಂದಿಸಿದರು.