RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ

ಗೋಕಾಕ:ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ 

ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ

ಗೋಕಾಕ ಸೆ 1 : ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಕಾರ್ಯಗಳು ಕಡಿಮೆಯಾಗುತ್ತಿದ್ದು ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ಸಾಮೂಹಿಕ ಧಾರ್ಮಿಕ ಕಾರ್ಯಗಳನ್ನು ಪ್ರತಿಯೊಂದು ಹಳ್ಳಿಗಳಲ್ಲಿ ಆಯೋಜನೆ ಮಾಡಲಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾ ಜಿಲ್ಲಾ ನಿರ್ದೇಶಕ ಸುರೇಶ ಮೊಯ್ಲಿ ಹೇಳಿದರು.
ಶುಕ್ರವಾರದಂದು ತಾಲೂಕಿನ ಸುಲಧಾಳ ಗ್ರಾಮದ ಶ್ರೀ ಜಡಿಸಿದ್ದೇಶ್ವರ ಮಠದ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾ, ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಸುಲಧಾಳ ಹಾಗೂ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಅಂಕಲಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವಿರೇಂದ್ರ ಹೆಗ್ಗಡೆಯವರ ಆಸೆಯದಂತೆ ಇಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಹಮ್ಮಿಕೊಂಡು ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸಿ ಸುಸಂಸ್ಕøತ ಸಮಾಜ ನಿರ್ಮಾಣಕ್ಕೆ ಶ್ರಮಿಸಲಾಗುತ್ತದೆ ಎಂದು ಹೇಳಿದರು.
ಈ ಕಾರ್ಯಕ್ರಮವನ್ನು ಶ್ರೀ ಜಡಿಸಿದ್ದೇಶ್ವರಮಠದ ಶ್ರೀ ಮಾರ್ಕಂಡೇಯ ಮಹಾಸ್ವಾಮಿಜಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪ್ರವಚನಕಾರ ಮಾರುತಿ ಶರಣರು, ಯೋಜನಾಧಿಕಾರಿ ಸುರೇಂದ್ರಕುಮಾರ, ಗ್ರಾ.ಪಂ ಮಾಜಿ ಅಧ್ಯಕ್ಷ ಮಾರುತಿ, ತಾ.ಪಂ ಸದಸ್ಯ ನಿರ್ಮಲಾ, ನಿಂಗಪ್ಪ ಮೇಲ್ವಿಚಾರಕರಾದ ಲಕ್ಷ್ಮಿಶ,ಚಂದ್ರಹಾಸ ಸೇರಿದಂತೆ ಇತರರು ಇದ್ದರು.

Related posts: