ಗೋಕಾಕ:ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಆಚರಣೆ
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಆಚರಣೆ
ಗೋಕಾಕ ಸೆ 11 : ದೇಶದ ಅರಣ್ಯ ಮತ್ತು ವನ್ಯ ಜೀವಿಗಳ ಸಂರಕ್ಷಣೆಗಾಗಿ ಅರಣ್ಯ ಇಲಾಖೆ ಮಾಡಿದ ತ್ಯಾಗ ಬಲಿದಾನಗಳ ಸ್ಮರಣೆಗಾಗಿ ಇಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ದೇವರಾಜ ಹೇಳಿದರು.
ಮಂಗಳವಾರದಂದು ಇಲ್ಲಿಯ ಅರಣ್ಯ ಇಲಾಖೆಯವರು ಹಮ್ಮಿಕೊಂಡ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಹುತಾತ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಮಾತನಾಡುತ್ತಿದ್ದ ಅವರು, ಅರಣ್ಯ ಸಂಪತ್ತು ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳ ಹೆಸರುಗಳು ಇಂದಿಗೂ ಹಚ್ಚಹಸಿರಾಗಿವೆ, ಅವರ ಧೈರ್ಯ,ತ್ಯಾಗ ಮುಂದಿನ ಪೀಳಿಗೆಗೆ ಸ್ಪೂರ್ತಿಯಾಗಲೆಂದು ಹೇಳಿದರು.
ಈ ಸಂದರ್ಭದಲ್ಲಿ ವಲಯ ಅರಣ್ಯ ಅಧಿಕಾರಿ ಕೆಂಪಣ್ಣ ವಣ್ಣೂರ, ಉಪ ವಲಯ ಅರಣ್ಯ ಅಧಿಕಾರಿ ಎಚ್.ಎಸ್.ಇಂಗಳಗಿ ಹಾಗೂ ಸಿಬ್ಬಂದಿಯವರು ಇದ್ದರು.