RNI NO. KARKAN/2006/27779|Thursday, December 12, 2024
You are here: Home » breaking news » ಘಟಪ್ರಭಾ:ದಿ.30 ರಂದು ರಾಜ್ಯಮಟ್ಟದ ವಿಶ್ವಕರ್ಮ ಯಜ್ಞ ಮಹೋತ್ಸವ ಕಾರ್ಯಕ್ರಮ : ಸಿ.ಆಯ್.ಪತ್ತಾರ

ಘಟಪ್ರಭಾ:ದಿ.30 ರಂದು ರಾಜ್ಯಮಟ್ಟದ ವಿಶ್ವಕರ್ಮ ಯಜ್ಞ ಮಹೋತ್ಸವ ಕಾರ್ಯಕ್ರಮ : ಸಿ.ಆಯ್.ಪತ್ತಾರ 

ದಿ.30 ರಂದು ರಾಜ್ಯಮಟ್ಟದ ವಿಶ್ವಕರ್ಮ ಯಜ್ಞ ಮಹೋತ್ಸವ ಕಾರ್ಯಕ್ರಮ : ಸಿ.ಆಯ್.ಪತ್ತಾರ

ಘಟಪ್ರಭಾ ಸೆ 27 : ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಬೆಂಗಳೂರು ಇದರ ರಾಜ್ಯಾಧ್ಯಕ್ಷರಾದ ಕೆ.ಪಿ.ನಂಜುಂಡಿ ಅವರ ಸಾರಥ್ಯದಲ್ಲಿ ಇದೇ ದಿ.30 ರಂದು ವಿಜಯಪೂರದಲ್ಲಿ ಅದ್ದೂರಿಯಾಗಿ ಆಚರಿಸಲು ಉದ್ದೇಶಿರುವ ರಾಜ್ಯ ಮಟ್ಟದ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮವನ್ನು ರದ್ದು ಪಡಿಸಿ ಅದೇ ದಿನದಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ವಿಶ್ವಕರ್ಮ ಯಜ್ಞ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಮಹಾಸಭಾದ ಬೆಳಗಾವಿ ಜಿಲ್ಲಾಧ್ಯಕ್ಷ ಸಿ.ಆಯ್.ಪತ್ತಾರ ತಿಳಿಸಿದರು.
ಅವರು ಗುರುವಾರ ಸ್ಥಳೀಯ ಪ್ರೇಸ್ ಕ್ಲಬ್‍ದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡುತ್ತ, ಮಡಿಕೇರಿ ಸೇರಿದಂತೆ ಕೊಡಗು ಹಾಗೂ ಕೇರಳದಲ್ಲಿ ಸಂಭವಿಸಿದ ಜಲಪ್ರಳಯ ಹಾಗೂ ಉತ್ತರ ಕರ್ನಾಟಕದಲ್ಲಿ ಬರಗಾಲದ ಹಿನ್ನಲೆಯಲ್ಲಿ ವಿಜಯಪೂರದಲ್ಲಿ ಅದ್ದೂರಿಯಾಗಿ ಆಚರಿಸಲು ಉದ್ದೇಶಿಸಿದ ರಾಜ್ಯ ಮಟ್ಟದ ವಿಶ್ವಕರ್ಮ ಜಯಂತ್ಯೋತ್ಸವವನ್ನು ರದ್ದು ಪಡಿಸಿ ಬದಲಾಗಿ ಜನರ ಶಾಂತಿ ನೆಮ್ಮದಿ ಹಾಗೂ ಜಲಪ್ರಳಯದಲ್ಲಿ ಪ್ರಾಣ ಕಳೆದುಕೊಂಡವರ ಸದ್ಗತಿಗಾಗಿ ಪ್ರಾರ್ಥಿಸಿ ಅದೇ ದಿನ ವಿಶ್ವಕರ್ಮ ಪೂಜೆ ಹಾಗೂ ಹೋಮ ಹವನಗಳನ್ನು ಹಮ್ಮಿಕೊಳ್ಳಲಾಗಿದೆ.
ದಿ.30 ರಂದು ಭಾನುವಾರ 11 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂ ಸರ್ಕಾರಿ ಪ್ರಾಥಮಿಕ ಶಾಲೆ ಆಟದ ಮೈದಾನದಲ್ಲಿ ರಾಜ್ಯಮಟ್ಟದ ವಿಶ್ವಕರ್ಮ ಯಜ್ಞ ಮಹೋತ್ಸವ ಜರುಗಲಿದ್ದು, ಸಮಾರಂಭದ ದಿವ್ಯ ಸಾನಿಧ್ಯವನ್ನು ಯಾದಗಿರಿ ವಿಶ್ವಕರ್ಮ ಏಕದಂಡಿಗಿ ಮಠದ ಶ್ರೀ ಕಾಳಹಸ್ತೇಂದ್ರ ಸ್ವಾಮಿಗಳು ಹಾಗೂ ವಿಶ್ವಕರ್ಮ ಸಮಾಜದ 60 ಮಠಗಳ ಮಠಾಧೀಶರು ವಹಿಸಲಿದ್ದಾರೆ.
ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ ನಾರಾಯಣ ಭಾಗವಹಿಸಲಿದ್ದು, ಬೆಳಗಾವಿ ಜಿಲ್ಲೆಯ ಎಲ್ಲ ವಿಶ್ವಕರ್ಮ ಸಮಾಜದ ಬಾಂಧವರು ಹಾಗೂ ಸಾರ್ವಜನಿಕರು ಈ ಪವಿತ್ರ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಿ.ಆಯ್.ಪತ್ತಾರ ಆಗ್ರಹಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ವಿಶ್ವಕರ್ಮ ಮಹಾಸಭಾದ ವಿಭಾಗೀಯ ಅಧ್ಯಕ್ಷರಾದ ರವಿ ಬಡಿಗೇರ, ಹುಕ್ಕೇರಿ ತಾಲೂಕಾ ಅಧ್ಯಕ್ಷ ಗಜಾನನ ಬಡಿಗೇರ, ಸಮಾಜದ ಹಿರಿಯರಾದ ನಾಗಲಿಂಗ ಪೋತದಾರ, ಪಾಂಡು ಪೋತದಾರ, ಪಿಂಟು ಬಡಿಗೇರ, ಆಶೋಕ ಬಡಿಗೇರ, ಸಂಜು ಪೋತದಾರ, ರಾಜು ಪಾಂಚಾಳ, ಬಸು ಬಡಿಗೇರ, ವೀರಭದ್ರ ಬಡಿಗೇರ ಸೇರಿದಂತೆ ಅನೇಕ ಪದಾಧಿಕಾರಿಗಳು ಇದ್ದರು.

Related posts: