ಗೋಕಾಕ:ಕ್ಲೇ-ಮಾಡ್ಲಿಂಗ್ ಸ್ಪರ್ಧೆಯಲ್ಲಿ ಕು. ಆದಿತ್ಯ ಚಿನಗೂಡಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕ್ಲೇ-ಮಾಡ್ಲಿಂಗ್ ಸ್ಪರ್ಧೆಯಲ್ಲಿ ಕು. ಆದಿತ್ಯ ಚಿನಗೂಡಿ ರಾಜ್ಯ ಮಟ್ಟಕ್ಕೆ ಆಯ್ಕೆ
ಗೋಕಾಕ ಅ 6 : ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಗಾರಖುರ್ದದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶೂನ್ಯಸಂಪಾದನ ಮಠದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಕನ್ನಡ ಮಾಧ್ಯಮ ಶಾಲೆ ಗೋಕಾಕ ಕುಮಾರ. ಆದಿತ್ಯ ಚಿನಗೂಡಿ ಇತನು( ಕ್ಲೇ-ಮಾಡ್ಲಿಂಗ್) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡು ನಮ್ಮ ಶಾಲೆಗೆ ಕೀರ್ತಿ ತಂದಿದ್ದಾನೆ. ಇವನ ಈ ಸಾಧನೆಗೆ ಸಂಸ್ಥೆಯ ಚೇರ್ಮನ್ನರು ಹಾಗೂ ಶಿಕ್ಷಕ ವೃಂದದವರು ಹರ್ಷ ವ್ಯಕ್ತ ಪಡಿಸಿದ್ದಾರೆ.