ಗೋಕಾಕ:ನ.1ರ ಕಾರ್ಯಕ್ರಮದ ಯಶಸ್ವಿಗೆ ಸ್ಥಳೀಯರ ಸಹಕಾರ ಅವಶ್ಯಕ
ನ.1ರ ಕಾರ್ಯಕ್ರಮದ ಯಶಸ್ವಿಗೆ ಸ್ಥಳೀಯರ ಸಹಕಾರ ಅವಶ್ಯಕ
* ಪೂರ್ವಭಾವಿ ಸಭೆಯಲ್ಲಿ ಈರಣ್ಣ ಬಳಿಗಾರ ಅಭಿಮತ * ಈ ಭಾರಿ ಅದ್ಧೂರಿ ಆಚರಣೆಗೆ ನಿರ್ಧಾರ
ಬೆಟಗೇರಿ ಅ 12 : ಗ್ರಾಮದಲ್ಲಿ ಮುಂಬರುವ ನ.1 ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆ ಹಾಗೂ ಡಾ. ಬೆಟಗೇರಿ ಕೃಷ್ಣಶರ್ಮರ ನೆನಪುಗಳು ಕಾರ್ಯಕ್ರಮದ ಯಶ್ವಸಿಗೆ ಸ್ಥಳೀಯರು ಸಹಾಯ, ಸಹಕಾರ ನೀಡಬೇಕೆಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ)ಯ ಅಧ್ಯಕ್ಷ ಈರಣ್ಣ ಬಳಿಗಾರ ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ)ಯ ಸಹಯೋಗದಲ್ಲಿ ಗ್ರಾಮದ ಶ್ರೀ ಲಕ್ಷ್ಮೀ ದೇವಿ ದೇವಾಲಯದ ಸಭಾಂಗಣದಲ್ಲಿ ಗುರುವಾರ ಅ.11 ರಂದು ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಡಾ. ಬೆಟಗೇರಿ ಕೃಷ್ಣಶರ್ಮರ ನೆನಪುಗಳು ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿ ವರ್ಷದ ಆಚರಣೆಗಿಂತ ಈ ಭಾರಿ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಮತ್ತು ವಿಭಿನ್ನವಾಗಿ ಆಚರಿಸಲಾಗುವುದು ಎಂದರು.
ಮುಂಬರುವ ನ.1 ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆ ಹಾಗೂ ಡಾ. ಬೆಟಗೇರಿ ಕೃಷ್ಣಶರ್ಮರ ನೆನಪುಗಳು ಕಾರ್ಯಕ್ರಮದ ಯಶ್ವಸಿಗೆ ಬೇಕಾದ ಹಲವಾರು ರೂಪರೇಶ ಮತ್ತು ವಿಷಯಗಳ ಕುರಿತು ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ)ಯ ಪದಾಧಿಕಾರಿಗಳು, ಸದಸ್ಯರು ಚರ್ಚಿಸಿದರು.
ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ)ಯ ಗ್ರಾಮ ಘಟಕದ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು, ಮತ್ತೀತರರು ಇದ್ದರು.