ಗೋಕಾಕ: ಜನರ ಆರ್ಶಿವಾದವೇ ನಮ್ಮ ಆಸ್ತಿ : ಕಾರ್ಯಕರ್ತರ ಸಭೆಯಲ್ಲಿ ಸಚಿವ ರಮೇಶ ಜಾರಕಿಹೊಳಿ ಅಭಿಮತ
ಜನರ ಆರ್ಶಿವಾದವೇ ನಮ್ಮ ಆಸ್ತಿ : ಕಾರ್ಯಕರ್ತರ ಸಭೆಯಲ್ಲಿ ಸಚಿವ ರಮೇಶ ಜಾರಕಿಹೊಳಿ ಅಭಿಮತ
ಗೋಕಾಕ ಜೂ 23: ಜನರ ಆರ್ಶಿವಾದೆವೇ ನಮ್ಮ ಶಕ್ತಿ ಎಂದು ಸಣ್ಣ ಕೈಗಾರಿಕೆ ಸಚಿವ ರಮೇಶ ಜಾರಕಿಹೊಳಿ ಹೇಳಿದರು ಇಂದು ಸಚಿವರ ಗೃಹ ಕಛೇರಿಯಲ್ಲಿ ಕರೆದಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು
ಜನರ ಪ್ರೀತಿ ಮತ್ತು ವಿಶ್ವಾಸ ದಿಂದ ಇಂದು ಕಾಂಗ್ರೆಸ್ ಪಕ್ಷ ನನಗೆ ಸಚಿವ ಸ್ಥಾನ ಹಾಗೂ ಸಹೋದರ ಸತೀಶ ಅವರಿಗೆ ಎಐಸಿಸಿ ಕಾರ್ಯದರ್ಶಿ ಸ್ಥಾನ ನೀಡಿದೆ ಎಲ್ಲರನ್ನು ವಿಶ್ವಾಸಕ್ಕೆ ತಗೆದು ಕೊಂಡು ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸಲು ಎಲ್ಲ ರೀತಿಯ ಕ್ರಮ ಕೈಗೋಳಲಾಗುವುದು ಬರುವ ದಿನಾಂಕ 30 ರಂದು ಆಥಣಿಯಲ್ಲಿ ನಡೆಯುವ ಕಾರ್ಯಕರ್ತರ ಸಮಾವೇಶದಲ್ಲಿ ಜಿಲ್ಲೆಯ ಎಲ್ಲಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾವೇಶವನ್ನು ಯಶ್ವಸಿ ಗೋಳಿಸಬೇಕೆಂದು ಸಚಿವ ರಮೇಶ ವಿನಂತಿಸಿದರು
ಈ ಸಂದರ್ಭದಲ್ಲಿ ಜಿ.ಪಂ, ತಾ.ಪಂ, ನಗರಸಭೆ ,ಪಟ್ಟಣ ಪಂಚಾಯಿತಿ , ಗ್ರಾ.ಪಂ , ಸೇರಿದಂತೆ ಇತರ ಸಂಘಸಂಸ್ಥೆಗಳ ಸದಸ್ಯರು ಹಿಗೂ ಕಾಂಗ್ರೆಸ್ ಪಕ್ಷದ ಸ್ಥಳೀಯ ಮತ್ತು ಗ್ರಾಮೀಣ ಭಾಗದ ಎಲ್ಲ ವಿಭಾಗಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು