ಖಾನಾಪುರ:ಕುಗ್ರಾಮಗಳಿಗೆ ಮೂಲಭೂತ ಸೌಕರ್ಯ ನೀಡಲು ಖಾನಾಪುರದ ಗ್ರಾಮಸ್ಥರ ಮನವಿ
ಕುಗ್ರಾಮಗಳಿಗೆ ಮೂಲಭೂತ ಸೌಕರ್ಯ ನೀಡಲು ಖಾನಾಪುರದ ಗ್ರಾಮಸ್ಥರ ಮನವಿ
ಖಾನಾಪುರ ಡಿ 4 : ತಾಲೂಕಿನ ಕುಗ್ರಾಮಗಳಾದ ಕೌಲಾಪುರವಾಡ ಹಾಗೂ ತೀರ್ಥಕುಂಡ ವರೆಗೆ ರಸ್ತೆ ನಿರ್ಮಾಣ ಹಾಗೂ ಗ್ರಾಮಗಳಿಗೆ ಮೂಲಭೂತ ಸೌಕರ್ಯ ನೀಡುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು
ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಹಾಗೂ ಸಮತಾ ಸೈನಿಕ ದಳ ವತಿಯಿಂದ ಇವತ್ತು ನಗರದ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜಾಥಾ ಮುಖಾಂತರ ಹೋರಾಟ ನಡೆಸಲಾಯ್ತು.
ಹಲವು ವರ್ಷಗಳಿಂದ ನಾವು ಹೋರಾಟ ಮಾಡುತ್ತಾ ಬಂದರೂ ಯಾವುದೇ ಪ್ರಯೋಜನವಾಗಲಿಲ್ಲ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಹಲವು ವರ್ಷಗಳಿಂದ ಇಲ್ಲಿನ ಜನರಿಗೆ ಮೂಲಭೂತ ಸೌಕರ್ಯಗಳಿಲ್ಲದೆ ಜೀವನ ನಡೆಸುವಂತಾಗಿದೆ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡರು.
ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ ಹೋರಾಟಗಾರು, ಆದಷ್ಟು ಬೇಗ ನಮ್ಮ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಹಾಗೂ ನಮ್ಮ ಹಳ್ಳಿಗಳ ಅಭಿವೃದ್ಧಿಗೆ ಜಿಲ್ಲಾಡಳಿತ ಗಮನ ನೀಡಬೇಕು ಎಂದು ಒತ್ತಾಯಿಸಿದರು.