RNI NO. KARKAN/2006/27779|Saturday, October 19, 2024
You are here: Home » breaking news » ಬೆಳಗಾವಿ:ಮೂಡಲಗಿ ಮಿನಿ ವಿಧಾನಸೌಧ ಕಟ್ಟಡಕ್ಕೆ 10 ಕೋಟಿ ರೂ : ಸಚಿವ ದೇಶಪಾಂಡೆ

ಬೆಳಗಾವಿ:ಮೂಡಲಗಿ ಮಿನಿ ವಿಧಾನಸೌಧ ಕಟ್ಟಡಕ್ಕೆ 10 ಕೋಟಿ ರೂ : ಸಚಿವ ದೇಶಪಾಂಡೆ 

ಮೂಡಲಗಿ ಮಿನಿ ವಿಧಾನಸೌಧ ಕಟ್ಟಡಕ್ಕೆ 10 ಕೋಟಿ ರೂ : ಸಚಿವ ದೇಶಪಾಂಡೆ
ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವ

ಬೆಳಗಾವಿ ಡಿ 10 : ಜಿಲ್ಲೆಯಲ್ಲಿ ಹೊಸದಾಗಿ ರಚನೆಗೊಂಡಿರುವ ಮೂಡಲಗಿ ತಾಲೂಕಿನ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಅವರು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಸೋಮವಾರದಂದು ಇಲ್ಲಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಅವರು, ಮಿನಿ ವಿಧಾನಸೌಧ ಕಟ್ಟಡದ ನಿರ್ಮಾಣದ ಅಂದಾಜು ಪಟ್ಟಿಯನ್ನು ತಯಾರಿಸಿ ಪ್ರಸ್ತಾವನೆಯು ಸರ್ಕಾರದಲ್ಲಿ ಸ್ವೀಕೃತವಾದ ಕೂಡಲೇ ನಿಯಮಾನುಸಾರ ಪರಿಶೀಲಿಸಿ ಆಡಳಿತಾತ್ಮಕ ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಜಿಲ್ಲೆಯಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಮೂಡಲಗಿ ತಾಲೂಕು ತಹಶೀಲ್ದಾರ ಕಛೇರಿಯನ್ನು ಸಧ್ಯಕ್ಕೆ ಮೂಡಲಗಿ ಪುರಸಭೆ ಕಟ್ಟಡದಲ್ಲಿ ನಡೆಸಲಾಗುತ್ತಿದೆ. ಮೂಡಲಗಿ ಪಟ್ಟಣದ ರಿ.ಸ.ನಂ. 511/1ಅ/1ಅ ನೇದ್ದರಲ್ಲಿ 3.16 ಎಕರೆ ಜಮೀನನ್ನು ತಾಲೂಕು ಮಟ್ಟದ ವಿವಿಧ ಕಛೇರಿಗಳ ಸಂಬಂಧ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣಕ್ಕಾಗಿ ನೀಡಲು ಮೂಡಲಗಿ ಪುರಸಭೆಯವರು 8.12.2017 ರಂದು ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗಿದೆ. ಆದರೆ ಸದರಿ ಜಾಗೆಯನ್ನು ಆಶ್ರಯ ವಸತಿ ಸಲುವಾಗಿ ಮೀಸಲಿಟ್ಟಿರುವುದರಿಂದ ಈ ಜಾಗೆಯನ್ನು ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣಕ್ಕೆ ನೀಡಬಾರದೆಂದು ಪಟ್ಟಣದ ಸಾರ್ವಜನಿಕರು ತಕರಾರು ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಸೂಕ್ತ ಜಮೀನನ್ನು ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸುವ ಕಾರ್ಯವು ಚಾಲ್ತಿಯಲ್ಲಿದೆ ಎಂದು ಸಚಿವ ಆರ್.ವಿ. ದೇಶಪಾಂಡೆ ಅವರು ತಿಳಿಸಿದರು.

Related posts: