ಗೋಕಾಕ:ಡಿ.31 ರಂದು ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ
ಡಿ.31 ರಂದು ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ
ಬೆಟಗೇರಿ ಡಿ 20 : ಗ್ರಾಮದ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ 21 ನೇ ವರ್ಷದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಅನ್ನಸಂತರ್ಪನೆ, ಶ್ರೀಶೈಲ ಪೀಠದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪುರಸ್ಕಾರ ದಾನಿಗಳಿಗೆ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ ಸ್ಥಳೀಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸನ್ನಿದಾನದಲ್ಲಿ ಇದೇ ಸೋಮವಾರ ಡಿ.31 ರಂದು ನಡೆಯಲಿದೆ.
ಅಂದು ಮುಂಜಾನೆ 10 ಗಂಟೆಗೆ ಸುತ್ತಲಿನ ಹಲವು ನಗರ ಪಟ್ಟಣ, ಹಳ್ಳಿಗಳಿಂದ ಆಗಮಿಸಿದ ಅಯ್ಯಪ್ಪ ಸ್ವಾಮಿ ಮಾಲಾಧಾರಿ, ಸಂತ, ಶರಣ, ಗಣ್ಯರನ್ನು ಬರಮಾಡಿಕೊಳ್ಳುವದು, ಸಂಜೆ 4 ಗಂಟೆಗೆ ಆನೆಯ ಮೇಲೆ ಅಯ್ಯಪ್ಪ ಸ್ವಾಮಿ ಭಾವ ಚಿತ್ರದ, ಶ್ರೀಶೈಲ ಪೀಠದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವದ ಭವ್ಯ ಮೆರವಣಿಗೆ ಇಲ್ಲಿಯ ವೀರಭದ್ರೇಶ್ವರ ದೇವಸ್ಥಾನದಿಂದ ಅಯ್ಯಪ್ಪ ಸ್ವಾಮಿ ಸನ್ನಿದಾನದ ತನಕ ಸುಮಂಗಲೆಯರಿಂದ ಆರತಿ, ಕುಂಭ, ಸಕಲ ವಾದ್ಯ ಮೇಳಗಳೊಂದಿಗೆ ಜರುಗಲಿದೆ.
6:30 ಗಂಟೆಗೆ ಅಗ್ನಿ ಪೂಜೆ, ಮಾಲಾದಾರಿಗಳಿಂದ ಬೆಂಕಿ ಪಾದ ನಡೆಯುವುದು, ರಾತ್ರಿ 7 ಗಂಟೆಗೆ ಮಹಾಪೂಜೆ, ಮಹಾಭಿಷೇಕ ನಡೆದು, 8 ಗಂಟೆಗೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಹಾಗೂ ದಾನಿಗಳಿಗೆ ಸತ್ಕಾರ ಸಮಾರಂಭ, ಧರ್ಮಸಭೆ, 9 ಗಂಟೆಗೆ ಮಹಾಪ್ರಸಾದ, ರಾಜು ದಂಡಿನ, ಸಹೋದರರಿಂದ ದೀಪೋತ್ಸವ ಸೇವೆ ಬಳಿಕ ದೀಪಕ ಕೊಟೂರ ಮತ್ತು ಕುಟುಂಬದವರಿಂದ ಅನ್ನ ಸಂತರ್ಪಣೆ ನಡೆಯಲಿದೆ.
ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ದರಾಮ ಪಂಡಿತಾರಾಧ್ಯ ಮಹಾಭಗವತ್ಪಾದರು ದಿವ್ಯ ಸಾನಿಧ್ಯ, ಮಮದಾಪೂರದ ಮೌನ ಮಲ್ಲಿಕಾರ್ಜುನ ಸ್ವಾಮಿಜಿ, ಸುಣಧೋಳಿಯ ಅಭಿನವ ಶಿವಾನಂದ ಸ್ವಾಮಿಜಿ, ಕಡಕೋಳದ ಸಿದ್ದರಾಯಜ್ಜನವರು ಸಾನಿಧ್ಯ, ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಹನುಮಂತ ವಡೇರ, ಮುತ್ತೆಪ್ಪ ವಡೇರ ನೇತೃತ್ವ, ಶಾಸಕ ಬಾಲಚಂದ್ರ ಜಾರಕಿಹೊಳಿ ಸಮಾರಂಭ ಉದ್ಘಾಟನೆ ನೆರವೇರಿಸಲಿದ್ದಾರೆ. ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಅಧ್ಯಕ್ಷತೆ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ರಾಜೇಂದ್ರ ಸಣ್ಣಕ್ಕಿ, ತಾಪಂ ಸದಸ್ಯ ಲಕ್ಷ್ಮಣ ನೀಲನ್ನವರ, ಗೋಕಾಕ ಎಪಿಎಂಸಿ ನಿರ್ದೇಶಕ ಬಸವರಾಜ ಸಾಯನ್ನವರ ಜ್ಯೊತಿ ಪ್ರಜ್ವಲಿಸಲಿದ್ದಾರೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗ್ರಾಪಂ ಅಧ್ಯಕ್ಷ, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗಣ್ಯರು, ಸಂತ ಶರಣರು ಮುಖ್ಯ ಅತಿಥಿಗಳಾಗಿ ಮತ್ತು ಅತಿಥಿಗಳಾಗಿ ಆಗಮಿಸಲಿದ್ದಾರೆ. ಸ್ಥಳೀಯ ಹಾಗೂ ಸುತ್ತಲಿನ ನಗರ, ಪಟ್ಟಣ, ಹಳ್ಳಿಗಳ ನೂರಾರು ಜನ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಗುರುಸ್ವಾಮಿಗಳ ಸಮ್ಮುಖದಲ್ಲಿ ವಿವಿಧ ಕಾರ್ಯಕ್ರಮಗಳು ನಡೆದ ಬಳಿಕ ಪ್ರಸಕ್ತ ವರ್ಷದ ಕಾರ್ಯಕ್ರಮ ಸಮಾರೂಪಗೊಳ್ಳಲಿದೆ ಎಂದು ಇಲ್ಲಿಯ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.