ಗೋಕಾಕ:ವಿಶ್ವ ಸೊಳ್ಳೆ ನಿವಾರಣೆ ದಿನಾಚರಣೆ ಕಾರ್ಯಕ್ರಮ
ವಿಶ್ವ ಸೊಳ್ಳೆ ನಿವಾರಣೆ ದಿನಾಚರಣೆ ಕಾರ್ಯಕ್ರಮ
ಬೆಟಗೇರಿ ಡಿ 20 : ಬೆಳಗಾವಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗೋಕಾಕ ತಾಲೂಕಾ ಆರೋಗ್ಯ ಅಧಿಕಾರಿಗಳ ಕಛೇರಿ ಹಾಗೂ ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಇತ್ತೀಚಿಗೆ ಸ್ಥಳೀಯ ವೀರಭದ್ರಪ್ಪ ವೀರಸಂಗಪ್ಪ ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಸೊಳ್ಳೆ ನಿವಾರಣೆ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಡೆಂಗಿ, ಮಲೇರಿಯಾ, ಎಚ್1ಎನ್1, ಸಾಂಕ್ರಾಮಿಕ ರೋಗಗಳು, ಜ್ವರ, ಸೊಳ್ಳೆ ಬೆಳೆಯುವ ಲಕ್ಷಣಗಳು ಹಾಗೂ ರೋಗ ತಡೆಗಟ್ಟುವ ವಿಧಾನಗಳ ಕುರಿತು ವಿವರಿಸಿದರು.
ಇಲ್ಲಿಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿ, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ವಿತರಿಸಲಾಯಿತು. ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅಧ್ಯಕ್ಷತೆ ವಹಿಸಿದ್ದರು. ಎಸ್‍ಡಿಎಂಸಿ ಮಾಜಿ ಅಧ್ಯಕ್ಷ ಶ್ರೀಶೈಲ ಗಾಣಗಿ ಮುಖ್ಯಅತಿಥಿಗಳಾಗಿ ಆಗಮಿಸಿದ್ದರು.
ಗೋಕಾಕ ತಾಲೂಕಾ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಕ ಎಸ್.ಎಂ. ಅಂಗಡಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಡಿ.ಈಶ್ವರಪ್ಪಗೋಳ ಸೇರಿದಂತೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಎಸ್‍ಡಿಎಂಸಿ ಅಧ್ಯಕ್ಷ, ಸದಸ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಮತ್ತೀತರರು ಇದ್ದರು. ಮೋಹನ ತುಪ್ಪದ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮಲ್ಲಿಕಾರ್ಜುನ ಹಿರೇಮಠ ವಂದಿಸಿದರು.