ಗೋಕಾಕ:ವಿದ್ಯಾರ್ಥಿಗಳಲ್ಲಿಯ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ಮಾಡಿ : ಲಖನ ಜಾರಕಿಹೊಳಿ
ವಿದ್ಯಾರ್ಥಿಗಳಲ್ಲಿಯ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ಮಾಡಿ : ಲಖನ ಜಾರಕಿಹೊಳಿ
ಗೋಕಾಕ ಡಿ 25 : ವಿದ್ಯಾರ್ಥಿಗಳಲ್ಲಿಯ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ಮಾಡಿ ಬೆಳಕಿಗೆ ತರುವ ಕಾರ್ಯವನ್ನು ಪಾಲಕರು ಹಾಗೂ ಶಿಕ್ಷಕರು ಮಾಡುವಂತೆ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಚೇರಮನ್ ಲಖನ ಜಾರಕಿಹೊಳಿ ಹೇಳಿದರು.
ಸೋಮವಾರದಂದು ರಾತ್ರಿ ಇಲ್ಲಿಯ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟ ಹಾಗೂ ಸ್ನೇಹ ಸಮ್ಮೇಳನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಪ್ರತಿಯೊಬ್ಬರಲ್ಲೂ ತಮ್ಮದೇಯಾದ ಒಂದು ಪ್ರತಿಭೆಯಿದ್ದು ಅದನ್ನು ಗುರುತಿಸಿ ಪ್ರೊತ್ಸಾಹಿಸಿದಾಗ ಅವರು ಸಾಧಕರಾಗಿ ನಾಡಿಗೆ ಕೀರ್ತಿ ತರುವ ಕಾರ್ಯವನ್ನು ಮಾಡುತ್ತಾರೆಂದು ತಿಳಿಸಿದರು.
ಕ್ರೀಡೆಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುವುದರಿಂದ ಉತ್ತಮವಾದ ಆರೋಗ್ಯ ಹೊಂದಲು ಸಾಧ್ಯ. ಪಠ್ಯದೊಂದಿಗೆ ಸಾಂಸ್ಕøತಿಕ ಹಾಗೂ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗುತ್ತಾರೆ. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗಿ ಸಂಸ್ಥೆಯು ಶ್ರಮಿಸುತ್ತಿದ್ದು ಸಂಸ್ಥೆಯೊಂದಿಗೆ ಪಾಲಕರು ಹಾಗೂ ಶಿಕ್ಷಕರು ಕೈ ಜೋಡಿಸಬೇಕೆಂದು ಕೋರಿದ್ದರು.
ಇದೇ ಸಂದರ್ಭದಲ್ಲಿ ಕಳೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಬಹುಮಾನ ವಿತರಿಸಲಾಯಿತು. ಶಾಲೆಯ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷೆ ಸಂಧ್ಯಾ ಜಾರಕಿಹೊಳಿ, ಕಾರ್ಯದರ್ಶಿ ಎಸ್.ಎಸ್.ಕಲಾಲ, ನಿರ್ದೇಶಕರಾದ ವಿನಾಯಕ ಚಿಪ್ಪಲಕಟ್ಟಿ, ಜಯಶೀಲ ಶೆಟ್ಟಿ, ಅತಿಥಿಗಳಾಗಿ ದೈಹಿಕ ಶಿಕ್ಷಣ ಪರಿವಿಕ್ಷಕ ವಿಜಯಕುಮಾರ ಸೂಲೆಗಾಂವಿ ಡಾ|| ತೇಜಸ್ವಿ ಹೊಸಮನಿ, ಲೆಕ್ಕಪರಿಶೋಧಕಿ ಸರಿತಾ ಪರಮಾರ, ಮುಖ್ಯೋಪಾಧ್ಯಾಯಿನಿ, ಎಸ್.ಆರ್.ಮಹೇಂದ್ರಕರ, ಶಿಕ್ಷಕ ಎಮ್.ಸಿ.ವಣ್ಣೂರ ಇದ್ದರು.