8 ಅಂಗಡಿಗಳ ಬೀಗ ಮುರಿದು ಕಳ್ಳತನ :: ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಘಟನೆ
8 ಅಂಗಡಿಗಳ ಬೀಗ ಮುರಿದು ಕಳ್ಳತನ :: ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಘಟನೆ
ಗೋಕಾಕ :: ಒಂದೇ ಗ್ರಾಮದಲ್ಲಿನ ಸೂಮಾರು 8 ಅಂಗಡಿಗಳ ಬೀಗ ಮುರಿದು ಕಳ್ಳತನಮಾಡಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಘಟಿಸಿದೆ.
ಕೌಜಲಗಿ ಗ್ರಾಮದ ಕಳ್ಳಿಗುದ್ದಿ ಸರ್ಕಲ್ ಬಳಿ ಇರುವ ಸಿಮೆಂಟ್ ಅಂಗಡಿ, ಜನರಲ್ ಸ್ಟೋರ್, ಪಂಚರ್ ಅಂಗಡಿ ಸೇರಿದಂತೆ ಒಟ್ಟು 8 ಅಂಗಡಿಗಳ ಬೀಗ ಮುರಿದ ಕಳ್ಳರು, ಸರಣಿ ಕಳ್ಳತನ ಮಾಡುವ ಮೂಲಕ ತಮ್ಮ ಕೈಚಳಕ ತೋರಿಸಿದ್ದಾರೆ. ಒಂದೊಂದು ಅಂಗಡಿಯಿಂದ ಲಕ್ಷಾಂತರ ರೂ. ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ.
ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಈ ಕುರಿತು ಪ್ರಕರಣ ದಾಖಲಾಲಿಸಿಕೊಂಡಿರುವ ಕುಲಗೋಡ ಪೊಲೀಸರು ಅಪರಾಧಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.
Related posts:
Posted in: Others