ಅಥಣಿ :ಬಿಜೆಪಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ : ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ಟೀಕೆ
ಬಿಜೆಪಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ : ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ಟೀಕೆ
ಅಥಣಿ ಜೂ 30: ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕಾರ್ಯಮಾಡುತ್ತಿರುವ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
ಅಥಣಿಯಲ್ಲಿ ಬೆಳಗಾವಿ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಅಧ್ಯಕ್ಷತೆವಹಿಸಿ ಮಾತನಾಡಿದರು
ಸಭ ಕಾ ಸಾಥ ಸಭಕಾ ವಿಕಾಸ ಎಂದು ಹೇಳುವ ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಷಕ್ಕೆ ಅಲ್ಪಸಂಖ್ಯಾತರು ಬೇಡವಾಗಿದ್ದಾರೆ ಆದರೆ ಕಾಂಗ್ರೇಸ ಪಕ್ಷ ಮಾತ್ರ ಅಹಿಂದ ಪರವಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ
ಬಿಜೆಪಿ ನಡಿಗೆ ದಲಿತರ ಕಡೆಗೆ ಎಂದು ಪ್ರಚಾರ ಮಾಡುತ್ತಿರುವ ನಾಯಕರು ತಾಕತ್ತಿದ್ದರೆ ತಮ್ಮ ಮನೆಯ ಹೆಣ್ಣು ಮಕ್ಕಳನ್ನು ಅವರ ಮನೆಗಳಿಗೆ ಕೋಟ್ಟು ಅವರ ಮನೆಯ ಹೆಣ್ಣು ಮಕ್ಕಳನ್ನು ತಮ್ಮ ಮನೆಗಳಿಗೆ ಕೊಟ್ಟು ಮದುವೆ ಮಾಡಲಿ ಎಂದು ಸವಾಲು ಹಾಕಿದರು
ಸದನದಲ್ಲಿ ಭ್ಯೂಲು ಫೀಲ್ಮ ನೋಡಿ ಜಿಲ್ಲೆಯ ಮಾನ ಹರಾಜ ಹಾಕಿದ ಶಾಸಕ ಸವದಿ ಅವರನ್ನು ಮುಂಬರುವ ಚುನಾವಣೆಯಲ್ಲಿ ಅಥಣಿ ಜನ ತಕ್ಕ ಪಾಠ ಕಲಿಸಬೇಕು
ಲಂಚವನ್ನು ಚೆಕ್ ಮುಖಾಂತರ ತಡೆದುಕೊಂಡ ಬಿಜೆಪಿಯ ಯಡಿಯೂರಪ್ಪ ಅವರಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಮಿಷನ್ 150 ಎಂದು ಸುಳ್ಳು ಪ್ರಚಾರ ಮಾಡಿ ಜನರನ್ನು ಮೋಸಮಾಡುತ್ತಿರುವ ಬಿಜೆಪಿಯ ಕನಸು ಎಂದು ನನಸಾಗದು
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಕಾಂಗ್ರೇಸ ನಾಯಕರು ಒಗ್ಗಟಾಗಿ ಕನಿಷ್ಟ 15 ಕ್ಷೇತ್ರದಲ್ಲಿ ಕಾಂಗ್ರೇಸ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕೆಂದು ಕರೆ ನೀಡಿದರು
ಸಮಾವೇಶದಲ್ಲಿ ಪಕ್ಷದ ಎಲ್ಲ ಮುನ್ನಚೂನಿಯ ನಾಯಕರು ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಶ್ರೀಮತಿ ಲಕ್ಮೀ ಹೆಬ್ಬಾಳಕರ ನಿರೂಪಿಸಿ ವಂದಿಸಿದರು
ಅಥಣಿ ಮಾಜಿ ಶಾಸಕ ಶಹಜಾನ ಡೊಂಗರಗಾಂವ ಪ್ರಾಸ್ತಾವಿಕ ಮಾತನಾಡಿದರು
ಸಮಾವೇಶದಲ್ಲಿ ಬೆಳಗಾವಿ ಜಿಲ್ಲೆಯ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು