ಗೋಕಾಕ: ಪ್ರಾಮಾಣಿಕವಾಗಿ ಸೇವೆ ಮಾಡಿ : ಅಧಿಕಾರಿಗಳಿಗೆ ಸಚಿವ ರಮೇಶ ಸಲಹೆ
ಪ್ರಾಮಾಣಿಕವಾಗಿ ಸೇವೆ ಮಾಡಿ : ಅಧಿಕಾರಿಗಳಿಗೆ ಸಚಿವ ರಮೇಶ ಸಲಹೆ
ಗೋಕಾಕ ಜು 1 : ಸರಕಾರದ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಲುಪಿಸಲು ಅಧಿಕಾರಿಗಳು ಪ್ರಮಾಣಿಕವಾಗಿ ಕಾರ್ಯ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು
ಅವರು ಸರ್ವ ಶಿಕ್ಷಣ ಅಭಿಯಾನ , ರಾಷ್ಟ್ರೀಯ ಮಾಧ್ಯಮಿಕ ಅಭಿಯಾನ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ , ಕ್ಷೇತ್ರ ಸಂಪನ್ಮೂಲ ಕೇಂದ್ರ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಸ್ಥಳೀಯ ಎನ್.ಇ.ಎಸ್ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಉಚಿತ ವೈದ್ಯಕೀಯ ಮೌಲ್ಯಾಂಕನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು
ಕಳೆದ ನಾಲ್ಕು ವರ್ಷಗಳಿಂದ ಅಸ್ತಿತ್ವದಲ್ಲಿರುವ ಕಾಂಗ್ರೇಸ ಸರಕಾರ ವಿದ್ಯಾರ್ಥಿಗಳಿಗಾಗಿ ಹಲವಾರು ಯೋಜನೆಗಳನ್ನು ನೀಡಿದೆ ಈ ಶಿಬಿರವು ಸಹ ಹಲವಾರು ಬಡ ವಿದ್ಯಾರ್ಥಿಗಳಿಗೆ ಸಂಜೀವನಿಯಾಗಿದೆ ವಿದ್ಯಾರ್ಥಿಗಳು ಈ ಶಿಬಿರದ ಸದುಪಯೋಗ ಪಡೆದು ಕೊಂಡು ಆರೋಗ್ಯವಂತರಾಗ ಬೇಕು
ಅಧಿಕಾರಿಗಳು ಶಿಬಿರದಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳಿಗೆ ಸರಿಯಾಗಿ ಪರೀಕ್ಷೆಗೆ ಒಳಪಡಿಸಿ ಸುಕ್ತ ಶಿಕ್ಷಿತ್ತೆ ನೀಡಿ ಮಾರ್ಗದರ್ಶನ ಮಾಡಬೇಕೆಂದು ಹೇಳಿದರು
ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ ಬಳಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು ಈ ಸಂದರ್ಭದಲ್ಲಿ ಉಪನಿರ್ದೇಶಕ ಗಜಾನನ ಮನ್ನಿಕೇರಿ , ಜಿ.ಪಂ ಸದಸ್ಯರಾದ ಟಿ.ಆರ್.ಕಾಗಲ ,ಮಡ್ಡೆಪ್ಪಾ ತೋಳಿನವರ , ನಗರಾದಧ್ಯಕ್ಷ ತಳದಪ್ಪಾ ಅಮ್ಮಣಗಿ , ಸೇರಿದಂತೆ ಅನೇಕರು ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ಶಿಕ್ಷಕ ಮಿರ್ಜಿ ನಿರೂಪಪಿಸಿ ವಂದಿಸಿದರು