ಗೋಕಾಕ:ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ನಿಧನಕ್ಕೆ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಸಂತಾಪ
ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ನಿಧನಕ್ಕೆ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಸಂತಾಪ
ಗೋಕಾಕ ಜ 29 : ಹಿರಿಯ ಸಮಾಜವಾದಿ ಹಾಗೂ ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ನಿಧನಕ್ಕೆ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಮೊದಲಿನಿಂದಲೂ ಹುಟ್ಟು ಹೋರಾಟಗಾರರಾಗಿದ್ದ ಅವರು, ಕಾರ್ಮಿಕ ಸಂಘಟನೆಗಳ ನೇತೃತ್ವ ವಹಿಸಿಕೊಂಡು ಕಾರ್ಮಿಕರ ಏಳ್ಗೆಗೆ ಶ್ರಮಿಸಿದ್ದರು. ಆಗಿನ ಪ್ರಧಾನಿಯಾಗಿದ್ದ ವಿಶ್ವನಾಥ ಪ್ರತಾಪ ಸಿಂಗ್ ಅವರ ಸಂಪುಟದಲ್ಲಿ ರೈಲ್ವೆ ಸಚಿವರಾಗಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ರಕ್ಷಣಾ ಸಚಿವರಾಗಿ ಜನಮೆಚ್ಚುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಫರ್ನಾಂಡಿಸ್ ಅವರ ನಿಧನದಿಂದಾಗಿ ಹಿರಿಯ ಸಮಾಜವಾದಿ ನಾಯಕನನ್ನು ಕಳೆದುಕೊಂಡು ರಾಜ್ಯ ಮತ್ತು ರಾಷ್ಟ್ರ ಬಡವಾಗಿದೆ. ಮೂಲತಃ ಕರ್ನಾಟಕದವರಾದ ಜಾರ್ಜ್ ಫರ್ನಾಂಡಿಸ್ ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿ ದೇವರು ನೀಡಲಿ ಎಂದು ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪದಲ್ಲಿ ತಿಳಿಸಿದ್ದಾರೆ.