RNI NO. KARKAN/2006/27779|Thursday, December 12, 2024
You are here: Home » breaking news » ಗೋಕಾಕ:ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ : ಕೊತವಾಲ

ಗೋಕಾಕ:ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ : ಕೊತವಾಲ 

ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ : ಕೊತವಾಲ

 
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮಾ 8 :

 
ಕಳೆದ ಎರಡು ದಶಕಗಳಿಂದ ಅನೇಕ ಯೋಜನೆಗಳನ್ನು ರೂಪಿಸಿ ಅವುಗಳನ್ನು ಅನುಷ್ಠಾನಗೊಳಿಸಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆಂದು ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಎಸ್.ಎ.ಕೊತವಾಲ ಹೇಳಿದರು.
ಶುಕ್ರವಾರದಂದು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ ನಗರದ ಪಕ್ಕದಲ್ಲಿ ಘಟಪ್ರಭಾ ನದಿಗೆ ಅಡ್ಡಲಾಗಿ ಸುಮಾರು 17.10 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬೆಳೆಯುತ್ತಿರುವ ನಗರಕ್ಕೆ ಅವಶ್ಯಕ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ರಸ್ತೆ ಅಗಲೀಕರಣ, ರಸ್ತೆ ಸುಧಾರಣೆ, ನಗರ ಹಾಗೂ ನದಿ ಸೌಂದರ್ಯೀಕರಣಕ್ಕೆ ಹಲವಾರು ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಸೇತುವೆ ನಿರ್ಮಾಣದಿಂದ ನಗರದ ಹೊರವಲಯದಲ್ಲಿ ಜನತೆಗೆ ಆಗುತ್ತಿದ್ದ ಲೋಳಸೂರ ಸೇತುವೆ ಮೇಲಿನ ಸಂಚಾರ ದಟ್ಟನೆಯನ್ನು ಕಡಿಮೆ ಮಾಡಿದಂತಾಗುತ್ತದೆ ಎಂದು ತಿಳಿಸಿದರು.
ಜಿ.ಪಂ. ಸದಸ್ಯ ಟಿ.ಆರ್.ಕಾಗಲ ಮಾತನಾಡಿ ಶಾಸಕ ರಮೇಶ ಕಾರಕಿಹೊಳಿ ಅವರು ಇಡೀ ಕ್ಷೇತ್ರದ ಜನತೆಗೆ ಅವಶ್ಯಕವಿರುವ ಮೂಲಭೂತ ಸೌಲಭ್ಯಗಳು ಒದಗಿಸುವದರ ಜೊತೆಗೆ ಶೈಕ್ಷಣಿಕ ಹಾಗೂ ನೀರಾವರಿ ಸೌಲಭ್ಯಕ್ಕೆ ಒತ್ತು ನೀಡಿ ಕಾರ್ಯ ಮಾಡುತ್ತಿದ್ದಾರೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಪಿಎಮ್‍ಸಿ ಅಧ್ಯಕ್ಷ ಅಡಿವೆಪ್ಪ ಕಿತ್ತೂರ, ತಾ.ಪಂ ಉಪಾಧ್ಯಕ್ಷ ವಾಯ್.ಬಿ.ನಾಯಿಕ, ಪೌರಾಯುಕ್ತ ಎಮ್.ಎಚ್.ಅತ್ತಾರ, ಕಾರ್ಯನಿರ್ವಾಹಕ ಅಭಿಯಂತರ ವಿ.ಎಸ್.ತಡಸಲೂರ, ನಗರಸಭಾ ಸದಸ್ಯ ಎ.ಎ.ದೇಸಾಯಿ (ಅಬ್ಬಾಸ), ಮುಖಂಡರಾದ ಜ್ಯೋತಿಬಾ ಸುಭಂಜಿ, ವಿಶ್ವನಾಥ ಬಿಳ್ಳೂರ, ಬಸವರಾಜ ದೇಶನೂರ , ಆರೀಪ ಪೀರಜಾದೆ , ಗುತ್ತಿಗೆದಾರ ಕಂಪನಿಯ ಸುಧೀಂದ್ರ ಕುಲಕರ್ಣಿ ಸೇರಿದಂತೆ ನಗರಸಭಾ ಸದಸ್ಯರು, ಮುಖಂಡರು ಇದ್ದರು.

Related posts: