RNI NO. KARKAN/2006/27779|Thursday, December 12, 2024
You are here: Home » breaking news » ಗೋಕಾಕ:ಲಖನ್ ಜಾರಕಿಹೊಳಿ ಅವರ ಮನವೊಲಿಸುವಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಸಫಲ

ಗೋಕಾಕ:ಲಖನ್ ಜಾರಕಿಹೊಳಿ ಅವರ ಮನವೊಲಿಸುವಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಸಫಲ 

ಸಂಗ್ರಹ ಚಿತ್ರ

ಲಖನ್ ಜಾರಕಿಹೊಳಿ ಅವರ ಮನವೊಲಿಸುವಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಸಫಲ

 
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಎ.3-

 

ಕಾಂಗ್ರೆಸ ಯುವ ಮುಖಂಡ ಲಖನ್ ಜಾರಕಿಹೊಳಿ ಅವರ ಮನವೊಲಿಸುವಲ್ಲಿ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸಫಲರಾಗಿದ್ದು ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ ಅಭ್ಯರ್ಥಿಗಳನ್ನು ಬೆಂಬಲಿಸಲು ಮುಂದಾಗಿದ್ದಾರೆ.
ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಕಾಂಗ್ರೆಸ-ಜೆಡಿಎಸ್ ಮೈತ್ರಿ ಸರಕಾರದ ಬಗ್ಗೆ ಮುನಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರು ಈವರೆಗೆ ತಮ್ಮ ನಡೆಯನ್ನು ಸ್ಪಷ್ಟಗೊಳಿಸಿರುವದಿಲ್ಲ. ಇದರಿಂದಾಗಿ ಲಖನ್ ಜಾರಕಿಹೊಳಿ ಅವರು ಕೂಡಾ ಮೌನವಾಗಿದ್ದರು.
ಬುಧವಾರದಂದು ಸಂಜೆ ಉಭಯ ಸಹೋದರರು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದರು. ತದನಂತರ ಲಖನ್ ಜಾರಕಿಹೊಳಿ ಅವರು ಕಾಂಗ್ರೆಸ ಪಕ್ಷದ ಕಾರ್ಯಕರ್ತನಿದ್ದು ಪಕ್ಷದ ಅಭ್ಯರ್ಥಿಗಳ ಪರವಾಗಿ ನಾಳೆಯಿಂದ ಪ್ರಚಾರ ಕೈಕೊಳ್ಳಲಿದ್ದಾರೆಂದು ಸಚಿವರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಗೋಕಾಕ ಮತಕ್ಷೇತ್ರದಲ್ಲಿ ಕಾಂಗ್ರೆಸ ಅಭ್ಯರ್ಥಿ ಡಾ. ವ್ಹಿ.ಎಸ್.ಸಾಧುನವರ ಅವರ ಪ್ರಚಾರಕ್ಕೆ ತೀವ್ರತೆ ದೊರೆಯಲಿದೆ ಎಂದು ಹೇಳಲಾಗುತ್ತಿದೆ.

Related posts: