ಗೋಕಾಕ:ಗೋಕಾಕಕ್ಕೆ ನಾಳೆ ಯಡಿಯೂರಪ್ಪ : ಪ್ರಚಾರ ಸಭೆಯಲ್ಲಿ 10 ಸಾವಿರ ಕಾರ್ಯಕರ್ತರು ಭಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕಕ್ಕೆ ನಾಳೆ ಯಡಿಯೂರಪ್ಪ : ಪ್ರಚಾರ ಸಭೆಯಲ್ಲಿ 10 ಸಾವಿರ ಕಾರ್ಯಕರ್ತರು ಭಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಏ 12 :
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಅವರ ಪ್ರಚಾರಾರ್ಥವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ನಾಳೆ ದಿ.13 ರಂದು ಗೋಕಾಕ ನಗರಕ್ಕೆ ಆಗಮಿಸಲಿದ್ದಾರೆಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.
ಇಲ್ಲಿಯ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ ಅವರು, ಲೋಕಸಭಾ ಚುನಾವಣೆ ನಿಮಿತ್ಯ ನಡೆಯುವ ಗೋಕಾಕ ಮತ್ತು ಅರಭಾವಿ ಮತಕ್ಷೇತ್ರಗಳ ಪ್ರಚಾರ ಸಭೆಯಲ್ಲಿ ಸುಮಾರು 10 ಸಾವಿರ ಕಾರ್ಯಕರ್ತರು ಭಾಗಿಯಾಗಲಿದ್ದಾರೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕ್ರಮದ ಮಾಹಿತಿ ನೀಡಿದರು.
ಇಲ್ಲಿನ ವಾಲ್ಮೀಕಿ ಕ್ರೀಡಾಂಗಣದಲ್ಲಿ ಮುಂಜಾನೆ 10 ಗಂಟೆಗೆ ನಡೆಯುವ ಚುನಾವಣಾ ಪ್ರಚಾರ ಸಭೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡುವರು. ಯಡಿಯೂರಪ್ಪ ಅವರೊಂದಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ, ಶಾಸಕರಾದ ಆನಂದ ಮಾಮನಿ, ಮಹಾದೇವಪ್ಪ ಯಾದವಾಡ, ಅಭಯ ಪಾಟೀಲ, ಅನೀಲ ಬೆನಕೆ, ವಿಧಾನ ಪರಿಷತ್ ಸದಸ್ಯರಾದ ಮಹಾಂತೇಶ ಕವಟಗಿಮಠ, ಅರುಣ ಶಹಾಪೂರ, ಹಣಮಂತ ನಿರಾಣಿ, ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ, ಸಂಜಯ ಪಾಟೀಲ, ಎಂ.ಎಲ್. ಮುತ್ತೆನ್ನವರ, ರಾಷ್ಟ್ರೀಯ ಸಫಾಯಿ ಕರ್ಮಚಾರಿ ನಿಗಮದ ಸದಸ್ಯ ಜಗದೀಶ ಹಿರೇಮನಿ, ಮುಖಂಡರಾದ ಅಶೋಕ ಪೂಜೇರಿ, ಈರಪ್ಪ ಕಡಾಡಿ ಸೇರಿದಂತೆ ಬಿಜೆಪಿ ರಾಜ್ಯ ಹಾಗೂ ಜಿಲ್ಲಾ ಘಟಕದ ಹಲವು ಪದಾಧಿಕಾರಿಗಳು ಭಾಗಿಯಾಗಲಿದ್ದಾರೆಂದು ಅವರು ಹೇಳಿದರು.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ಕೊಪ್ಪಳದಿಂದ ಹೆಲಿಕಾಪ್ಟರ್ ಮೂಲಕ ಗೋಕಾಕ ನಗರಕ್ಕೆ ಬೆಳಿಗ್ಗೆ 9.30 ಗಂಟೆಗೆ ಆಗಮಿಸಲಿದ್ದಾರೆ. ಇದಕ್ಕಾಗಿ ಎನ್ಎಸ್ಎಫ್ ಶಾಲಾ ಆವರಣದಲ್ಲಿ ಹೆಲಿಪ್ಯಾಡ್ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಎಸ್.ವ್ಹಿ. ದೇಮಶೆಟ್ಟಿ, ಅರಭಾವಿ ಮಂಡಲ ಅಧ್ಯಕ್ಷ ಸುಭಾಸ ಪಾಟೀಲ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರೇಮಾ ಬಂಡಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ ಮಾದರ, ಗೋಕಾಕ ಕ್ಷೇತ್ರದ ಚುನಾವಣಾ ಸಮೀತಿ ಸಂಚಾಲಕ ಚಿದಾನಂದ ದೇಮಶೆಟ್ಟಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ಪ್ರಮೋದ ನುಗ್ಗಾನಟ್ಟಿ, ಬಸವರಾಜ ಹಿರೇಮಠ, ಸಂತೋಷ ಹುಂಡೇಕಾರ, ಸೇರಿದಂತೆ ಬಿಜೆಪಿಯ ಪದಾಧಿಕಾರಿಗಳು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶಾಸಕರು ಗೋಕಾಕ ಹಾಗೂ ಅರಭಾವಿ ಮತಕ್ಷೇತ್ರಗಳ ಬಿಜೆಪಿ ಪದಾಧಿಕಾರಿಗಳೊಂದಿಗೆ ನಾಳಿನ ಕಾರ್ಯಕ್ರಮದ ಯಶಸ್ಸಿಗೆ ಪೂರ್ವಭಾವಿ ಸಭೆಯನ್ನು ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆಸಿದರು.