ಗೋಕಾಕ:ಡಾ.ಬಿ.ಆರ್.ಅಂಬೇಡ್ಕರ ಅವರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಿ
ಡಾ.ಬಿ.ಆರ್.ಅಂಬೇಡ್ಕರ ಅವರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಿ
ನಮ್ಮ ಬೆಳಗಾವಿ ಸುದ್ದಿ , ಬೆಟಗೇರಿ ಏ 14 :
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ ಅಧ್ಯಕ್ಷ ಸುಭಾಷ ಜಂಬಗಿ ಹೇಳಿದರು.
ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ ಹಾಗೂ ಗ್ರಾಮ ಪಂಚಾಯತ ಸಹಯೋಗದಲ್ಲಿ ರವಿವಾರ ಏ.14ರಂದು ಸ್ಥಳೀಯ ಅಂಬೇಡ್ಕರ ವೃತ್ತದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ 128ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಬೇಡ್ಕರ ಅವರು ಭಾರತ ದೇಶಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ ಮಹಾ ಮಾನವತಾವಾದಿಯಾಗಿದ್ದಾರೆ ಎಂದರು.
ಸಂಗಯ್ಯ ಹಿರೇಮಠ ಕಾರ್ಯಕ್ರಮದ ಸಾನಿಧ್ಯ ವಹಿಸಿ ಡಾ.ಬಿ ಆರ್ ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚಣೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು.
ಲಕ್ಷ್ಮಣ ನೀಲಣ್ಣವರ, ಸುಭಾಸ ಕರೆನ್ನವರ, ಬಸವರಾಜ ಪಣದಿ, ಬ್ರಹ್ಮಾನಂದ ಜಡೇರ, ರವಿ ದಾನವ್ವಗೋಳ, ಯಮನಪ್ಪ ತಳವಾರ, ವೀರನಾಯ್ಕ ನಾಯ್ಕರ, ಮೆಳೆಪ್ಪ ಹರಿಜನ, ವಿಠಲ ದಾನವ್ವಗೋಳ, ಅಶೋಕ ಹರಿಜನ, ದುರ್ಗೆಶ ಸಪಾಲಿಗ, ಗೌಡಪ್ಪ ಮಾಳೇದ, ಸುರೇಶ ಬಾಣಸಿ, ಶಿವಾನಂದ ಐದುಡ್ಡಿ, ಗೋಪಾಲ ಹೊಸಟ್ಟಿ, ಶಿವಪ್ಪ ಚಂದರಗಿ, ಬಸೆಟೆಪ್ಪ ಭಜಂತ್ರಿ, ಗ್ರಾಪಂ ಸಿಬ್ಬಂದಿ, ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.