RNI NO. KARKAN/2006/27779|Monday, December 23, 2024
You are here: Home » breaking news » ಗೋಕಾಕ:ಮನ್ನಿಕೇರಿ ಮಹಾಂತಲಿಂಗೇಶ್ವರ ಜಾತ್ರೆಯಲ್ಲಿ ಸಾಧಕರಿಗೆ ಸನ್ಮಾನ

ಗೋಕಾಕ:ಮನ್ನಿಕೇರಿ ಮಹಾಂತಲಿಂಗೇಶ್ವರ ಜಾತ್ರೆಯಲ್ಲಿ ಸಾಧಕರಿಗೆ ಸನ್ಮಾನ 

ಮನ್ನಿಕೇರಿ ಮಹಾಂತಲಿಂಗೇಶ್ವರ ಜಾತ್ರೆಯಲ್ಲಿ ಸಾಧಕರಿಗೆ ಸನ್ಮಾನ

 

ನಮ್ಮ ಬೆಳಗಾವಿ ಸುದ್ದಿ , ಕೌಜಲಗಿ ಏ 24 :

 
ಮನ್ನಿಕೇರಿ ಮಹಾಂತಲಿಂಗೇಶ್ವರ ಮಠದಲ್ಲಿ ಪ್ರತಿವರ್ಷವೂ ಆಧ್ಯಾತ್ಮಿಕ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ವಿಚಾರಗಳ ಕುರಿತು ಜಾತ್ರೆಯ ಅಂಗವಾಗಿ 5 ದಿನಗಳ ಕಾಲ ಪ್ರವಚನಗಳನ್ನು ಹಮ್ಮಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ, ಸಾಧನೆ ಮಾಡಿದವರನ್ನು ಶ್ರೀಮಠದಿಂದ ಸನ್ಮಾನಿಸುತ್ತೇವೆ. ಅದರಂತೆ ಈ ವರ್ಷ ಮೂಡಲಗಿ ಬಿಇಓ ಅಜಿತ ಮನ್ನಿಕೇರಿ ಅವರು ಶಿಕ್ಷಣ ಕ್ಷೇತ್ರದಲ್ಲಿ ಅನುಪಮ ಸಾಧನೆ ಮಾಡಿದ್ದಾರೆ ಮತ್ತು ಕೌಜಲಗಿಯ ಸಾಹಿತಿ ಡಾ. ರಾಜು ಕಂಬಾರ ಅವರು ಇತ್ತೀಚೆಗೆ ಕನ್ನಡ ವಿಶ್ವವಿದ್ಯಾಲಯ ಹಂಪಿಯಿಂದ ಪಿಎಚ್.ಡಿ. ಪಡೆದುಕೊಂಡ ಪ್ರಯುಕ್ತ ಈ ಸಾಧಕರನ್ನು ಸನ್ಮಾನಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಮನ್ನಿಕೇರಿ ಮಹಾಂತಲಿಂಗೇಶ್ವರ ಮಠದ ಶ್ರೀ ವಿಜಯ ಸಿದ್ಧೇಶ್ವರ ಮಹಾಸ್ವಾಮಿಗಳು ಹೇಳಿದರು.
ಸಮೀಪದ ಮನ್ನಿಕೇರಿ ಮಹಾಂತಲಿಂಗೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಪ್ರವಚನ ಕಾರ್ಯಕ್ರಮದ ಸಮಾರೋಪ ಸಮಾರಂಭ ಇತ್ತೀಚೆಗೆ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶ್ರೀಗಳು ಮಾತನಾಡಿದರು. ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹಾಗೂ ಕೌಜಲಗಿ ಸಾಹಿತಿ ಡಾ.ರಾಜು ಕಂಬಾರ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

Related posts: