ಗೋಕಾಕ:ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ ಸನ್ಮಾನ
ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ ಸನ್ಮಾನ
ನಮ್ಮ ಬೆಳಗಾವಿ ಸುದ್ದಿ , ಬೆಟಗೇರಿ ಮೇ 5 :
ಗ್ರಾಮದ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ಸಹಯೋಗದಲ್ಲಿ ಇಲ್ಲಿಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಸನ್ನಿದಾನದಲ್ಲಿ ಅಮವಾಸ್ಯೆ ಕಾರ್ಯಕ್ರಮ ಪ್ರಯುಕ್ತ ಹಮ್ಮಿಕೊಂಡ ಅಯ್ಯಪ್ಪಸ್ವಾಮಿ ಗದ್ಗಗೆಗೆ ಅಭಿಷೇಕ, ಪೂಜೆ, ಅನ್ನ ಸಂತರ್ಪನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಶನಿವಾರ ಮೇ.4 ರಂದು ಸಂಜೆ 8 ಗಂಟೆಗೆ ಸಂಭ್ರಮದಿಂದ ನಡೆಯಿತು.
ಗ್ರಾಪಂ ಸದಸ್ಯ ಸುಭಾಷ ಕರೆಣ್ಣವರ ಅಧ್ಯಕ್ಷತೆ ವಹಿಸಿದ್ದರು. ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಅಯ್ಯಪ್ಪಸ್ವಾಮಿ ಭಕ್ತ ಮಾಯಪ್ಪ ದಾವಣಿ ಅವರು ಅನ್ನ ಸಂತರ್ಪನೆ ಕಾರ್ಯಕ್ರಮ ನೆರವೇರಿಸಿದರು.
ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ಎಸ್.ಎಸ್.ವೈ. ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳನ್ನು ಸ್ಥಳೀಯ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ಪರವಾಗಿ ಶಾಲು ಹೊದಿಸಿ ಸನ್ಮಾನಿಸಿದರು.
ಸ್ಥಳೀಯ ಅಯ್ಯಪ್ಪಸ್ವಾಮಿ ಗುರುಸ್ವಾಮಿಗಳಾದ ವೀರನಾಯ್ಕ ನಾಯ್ಕರ, ಬಸವರಾಜ ಬೆಟಗೇರಿ, ಮಹಾದೇವ ಕಂಬಾರ, ರಾಮಣ್ಣ ಮುಧೋಳ, ರಾಜು ಪತ್ತಾರ, ಪೂಜೇರ, ರಾಜು ದಂಡಿನ, ಶಂಭು ಹಿರೇಮಠ, ಗಿರೀಶ ಗಾಣಗಿ, ವೀರಭದ್ರ ದೇಯಣ್ಣವರ, ವಿಜಯ ಪಣದಿ, ರುದ್ರಪ್ಪ ದೇಯಣ್ಣವರ, ನಾಗರಾಜ ಬೆಳಗಲಿ, ಸಿದ್ದು ಚಂದರಗಿ ಸೇರಿದಂತೆ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ಗಣ್ಯರು, ಅಯ್ಯಪ್ಪ ಸ್ವಾಮಿ ಗುರುಸ್ವಾಮಿಗಳು, ಭಕ್ತರು, ಇತರರು ಇದ್ದರು.