RNI NO. KARKAN/2006/27779|Friday, October 18, 2024
You are here: Home » breaking news » ಗೋಕಾಕ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ 1.60 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ.

ಗೋಕಾಕ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ 1.60 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ. 

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ 1.60 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ.

 
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ 31 :

 
ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಸಗುಪ್ಪಿ ಮತ್ತು ಹಡಗಿನಾಳ ಗ್ರಾಮಗಳಲ್ಲಿ ಯಾತ್ರಿ ನಿವಾಸ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಗುರುವಾರ ಸಂಜೆ ಹಡಗಿನಾಳ ಗ್ರಾಮದಲ್ಲಿ 1.60 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿಪರ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರವಾಸೋದ್ಯಮ ಇಲಾಖೆಯಿಂದ ಹಡಗಿನಾಳ ಗ್ರಾಮದ ಮುತ್ತೇಶ್ವರ ದೇವಸ್ಥಾನದ ಹತ್ತಿರ 25 ಲಕ್ಷ ರೂ. ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಾಣವಾಗಲಿದೆ. ಜೊತೆಗೆ ಮಸಗುಪ್ಪಿಯ ಮಹಾಲಕ್ಷ್ಮೀ ದೇವಸ್ಥಾನದ ಬಳಿ 50 ಲಕ್ಷ ರೂ. ವೆಚ್ಚದಲ್ಲಿ ಸುಂದರವಾದ ಯಾತ್ರಿ ನಿವಾಸ ಭಕ್ತರಿಗೆ ಸಮರ್ಪಣೆಯಾಗಲಿದೆ. ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಕೈಗೊಂಡು ಆರು ತಿಂಗಳೊಳಗೆ ಮುಗಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈಗಾಗಲೇ ಅರಭಾವಿ ಮತಕ್ಷೇತ್ರದ ಅರಭಾವಿ, ಬಬಲಾದಿಮಠ, ಕುಲಗೋಡ, ತಳಕಟ್ನಾಳ, ಕಲ್ಲೋಳಿ, ಉದಗಟ್ಟಿ, ಹುಣಶ್ಯಾಳ ಪಿಜಿ, ಸುಣಧೋಳಿ, ಗ್ರಾಮಗಳಲ್ಲಿ ಯಾತ್ರಿ ನಿವಾಸ ಕಾಮಗಾರಿ ಮುಗಿದಿವೆ. ಗೋಸಬಾಳ ಗ್ರಾಮದ ಮಾರುತಿ ದೇವಸ್ಥಾನದ ಪಕ್ಕ ಯಾತ್ರಿ ನಿವಾಸ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಮಗಾರಿಗಳನ್ನು ಭೂಸೇನಾ ನಿಗಮಕ್ಕೆ ಗುತ್ತಿಗೆ ನೀಡಲಾಗಿದೆ ಎಂದು ಅವರು ಹೇಳಿದರು.
ಅರಭಾವಿ ಮತಕ್ಷೇತ್ರದ ಏಳ್ಗೆಗೆ ಕಳೆದ 15 ವರ್ಷಗಳಿಂದ ಎಲ್ಲ ಇಲಾಖೆಗಳ ಅಡಿಯಲ್ಲಿ ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗಿದೆ. ನೀರಾವರಿ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದು ಮುಂಬರುವ ದಿನಗಳಲ್ಲಿಯೂ ಸರ್ಕಾರದ ಹಲವಾರು ಯೋಜನೆಗಳನ್ನು ಕೈಗೊಂಡು ಅರಭಾವಿಯನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಇರಾದೆ ಹೊಂದಿರುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಬೆಳಗಾವಿ ಲೋಕಸಭಾ ಸದಸ್ಯ ಸುರೇಶ ಅಂಗಡಿ ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿರುವದರಿಂದ ಅರಭಾವಿ ಕ್ಷೇತ್ರಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಈಗಾಗಲೇ ಕ್ಷೇತ್ರದ ಅಭಿವೃದ್ದಿಗೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಸುರೇಶ ಅಂಗಡಿ ಅವರಲ್ಲಿ ಮನವಿ ಮಾಡಲಾಗಿದೆ. 21 ವರ್ಷಗಳ ನಂತರ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸುರೇಶ ಅಂಗಡಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದು ಬೆಳಗಾವಿ ಲೋಕಸಭಾ ಕ್ಷೇತ್ರದ ಅಭಿವೃದ್ಧಿಯ ಧ್ಯೋತಕಕ್ಕೆ ಸಾಕ್ಷಿಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಭೂಮಿ ಪೂಜೆ : ಹಡಗಿನಾಳದ ಮುತ್ತೇಶ್ವರ ದೇವಸ್ಥಾನದ ಆವರಣದಲ್ಲಿ 25 ಲಕ್ಷ ರೂ. ವೆಚ್ಚದ ಯಾತ್ರಿ ನಿವಾಸ, ಮಸಗುಪ್ಪಿ ಮಹಾಲಕ್ಷ್ಮೀ ದೇವಸ್ಥಾನದ ಪಕ್ಕ 50 ಲಕ್ಷ ರೂ. ವೆಚ್ಚದ ಯಾತ್ರಿ ನಿವಾಸ, ಹಡಗಿನಾಳದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ 10 ಲಕ್ಷ ರೂ. ವೆಚ್ಚದ ಸಾಂಸ್ಕøತಿಕ ಭವನ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 75 ಲಕ್ಷ ರೂ. ವೆಚ್ಚದಲ್ಲಿ ಜೋಕಾನಟ್ಟಿ ಗ್ರಾಮದಲ್ಲಿ ಅಲೇಮಾರಿ ಜನಾಂಗದ ಕಾಲನಿಯಲ್ಲಿ ಕಾಂಕ್ರೀಟ ರಸ್ತೆ ನಿರ್ಮಾಣಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೂಮಿ ಪೂಜೆ ನೆರವೇರಿಸಿದರು.
ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ, ತಾಪಂ ಮಾಜಿ ಸದಸ್ಯ ನಾಗಪ್ಪ ಮಂಗಿ, ಮುತ್ತೇನಗೌಡ ಪಾಟೀಲ, ಘಯೋಮನೀಬ ಮಹಾಮಂಡಳ ಅಧ್ಯಕ್ಷ ಅಶೋಕ ಖಂಡ್ರಟ್ಟಿ, ನ್ಯಾಯವಾದಿ ಮುತ್ತೆಪ್ಪ ಕುಳ್ಳೂರ, ಮುದಕಪ್ಪ ತಳವಾರ, ಬಸು ಯರಗುದ್ರಿ, ಕಂಬಣ್ಣಾ ದೇಮನ್ನವರ, ಕಲ್ಲಪ್ಪ ವಡೇರ, ಯಲ್ಲಪ್ಪಸ್ವಾಮಿ ವಡೇರ, ಲಂಕೆಪ್ಪ ಯರಗುದ್ರಿ, ಭೂಸೇನಾ ನಿಗಮದ ಕೆಂಪಣ್ಣಾ ಕೊಣ್ಣೂರ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Related posts: