ಗೋಕಾಕ:ಸಂವಿಧಾನಾತ್ಮಕವಾಗಿ ಮೀಸಲಾತಿಯನ್ನು ವಿಸ್ತರಿಸುವಂತೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘದ ಪ್ರತಿಭಟನೆ
ಸಂವಿಧಾನಾತ್ಮಕವಾಗಿ ಮೀಸಲಾತಿಯನ್ನು ವಿಸ್ತರಿಸುವಂತೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘದ ಪ್ರತಿಭಟನೆ
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಜೂ 6 :
ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಪಂಗಡಕ್ಕೆ ಕೇಂದ್ರ ಸರ್ಕಾರ ನೀಡುತ್ತಿರುವ ಪ್ರಕಾರ ಸಂವಿಧಾನಾತ್ಮಕವಾಗಿ ಮೀಸಲಾತಿಯನ್ನು ವಿಸ್ತರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪರಿಶಿಷ್ಠ ಪಂಗಡಗಳ ಸರ್ಕಾರಿ ನೌಕರರ ಸಂಘದ ತಾಲೂಕಾ ಘಟಕದ ಪದಾಧಿಕಾರಿಗಳು ತಹಶೀಲದಾರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಗುರುವಾರಂದು ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕರ್ನಾಟಕ ರಾಜ್ಯ ಪರಿಶಿಷ್ಠ ಪಂಗಡಗಳ ಸರ್ಕಾರಿ ನೌಕರರ ಸಂಘದ ತಾಲೂಕಾ ಘಟಕದ ಪದಾಧಿಕಾರಿಗಳು ಪ್ರತಿಭಟನಾ ಮೆರವಣಿಗೆ ಮೂಲಕ ಮಿನಿ ವಿಧಾನ ಸೌಧಕ್ಕೆ ತೆರಳಿ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರಿಗೆ ಮನವಿ ಅರ್ಪಿಸಿದರು.
ರಾಜ್ಯದಲ್ಲಿ ವಿವಿಧ ಹುದ್ದೆಗಳಿಗೆ ನಡೆಯುವ ನೇಮಕಾತಿ, ಬಡ್ತಿ ಹಾಗೂ ಶೈಕ್ಷಣಿಕ ಸಂಸ್ಥೆಗಳ ಪ್ರವೇಶಾತಿಗಳಲ್ಲಿ ಈಗೀರುವ ಶೇ 3% ರಷ್ಟು ಮೀಸಲಾತಿಯನ್ನು ಶೇ 7.5% ಕ್ಕೆ ಹೆಚ್ಚಿಸಬೇಕು. ಅರ್ಹರಲ್ಲದವರಿಗೆ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರವನ್ನು ನೀಡುವುದನ್ನು ತಡೆಗಟ್ಟಬೇಕು. ರಾಜ್ಯದಲ್ಲಿರುವ 50 ಬುಡಕಟ್ಟು ಗುಂಪುಗಳನ್ನು ಪರಿಶಿಷ್ಟ ವರ್ಗವೆಂದು ಅಧಿಸೂಚಿಸಲಾಗಿದೆ. ಅವರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ಪ್ರತ್ಯೇಕ ಪರಿಶಿಷ್ಟ ವರ್ಗದ ಸಚಿವಾಲಯವನ್ನು ಸ್ಥಾಪಿಸಬೇಕು ಹಾಗೂ ಬೇರಡ ಎಂಬ ನಾಮಾಂಕಿತವು ಬೇಡರ ಜಾತಿಗೆ ಸಮನಾಗಿದ್ದು ಬೇರಡ ಜಾತಿಯನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಸ್.ಎ.ನಾಯಿಕ ಪದಾಧಿಕಾರಿಗಳಾದ ಎಲ್.ಜಿ.ನಾಯಕರ, ವಿ.ಬಿ.ಬಂಬರಗಿ, ಜಿ.ಆರ್.ಸನದಿ, ಎಸ್.ಆರ್.ಗೌಡಪ್ಪಗೊಳ, ಬಿ.ಎಸ್.ಸನದಿ, ಎಸ್.ಬಿ.ಪಂಗಣ್ಣವರ, ಎನ್.ಬಿ.ಬಾಗೈಯಗೋಳ, ವಾಯ್.ಟಿ.ಪಾಟೀಲ, ಜಿ.ಆರ್.ಮಾಳಗಿ, ಬಿ.ಎಮ್.ನಾಯಿಕ, ಆಯ್.ಆಯ್,ಗುಡ್ಡಾಗೋಳ, ಮುಖಂಡರಾದ ಬಸವರಾಜ ಸಾಯನ್ನವರ ಸೇರಿದಂತೆ ಅನೇಕರು ಇದ್ದರು.